ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ “ಕುರಿಯ ಪ್ರಶಸ್ತಿ “

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಉಜಿರೆ:  ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ವತಿಯಿಂದ 2020ನೇ ಸಾಲಿನ “ಕುರಿಯ ವಿಠಲ ಶಾಸ್ತ್ರಿ ಪ್ರಶಸ್ತಿ”ಯನ್ನು  ಹಿರಿಯ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಕುರಿಯ ಪ್ರತಿಷ್ಠಾನದ ಸಂಚಾಲಕ ಅಶೋಕ್ ಭಟ್ ಉಜಿರೆ ತಿಳಿಸಿದ್ದಾರೆ.
22ನೇ ವರ್ಷದ ಪ್ರಶಸ್ತಿ ಇದಾಗಿದ್ದು ಈವರೆಗೆ ಶಂಕರ ನಾರಾಯಣ ಸಾಮಗ, ಶೇಣಿ ಗೋಪಾಲಕೃಷ್ಣ ಭಟ್, ನೆಡ್ಳೆ ನರಸಿಂಹ ಭಟ್, ಚಿಪ್ಪಾರು ಕೃಷ್ಣಯ್ಯ ಬಲ್ಲಾಳ್, ಹೊಸ್ತೋಟ ಮಂಜುನಾಥ ಭಾಗವತ ಮೊದಲಾದ ಗಣ್ಯರಿಗೆ ನೀಡಲಾಗಿದ್ದು, ಯಕ್ಷಗಾನ ಕ್ಷೇತ್ರದಲ್ಲಿ ಆದ್ಯಂತವಾಗಿ ಅನೇಕ ದಶಕಗಳಿಂದ ಸೇವೆ ಸಲ್ಲಿಸಿದ ಹಿರಿಯ ಕಲಾವಿದರಿಗೆ ಈ ಪ್ರಶಸ್ತಿಯನ್ನು ನೀಡಿಕೊಂಡು ಬರಲಾಗುತ್ತಿದೆ.
ಬಡಗುತಿಟ್ಟು ಯಕ್ಷಗಾನದಲ್ಲಿ ಹೊಸಶಕೆಯನ್ನು ಸೃಷ್ಟಿಸಿದ, ಪೆರ್ಡೂರು ಮೇಳದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನೂತನ ಪ್ರಯೋಗ ಮತ್ತು ಪ್ರಸಂಗಗಳ ಮೂಲಕ ಪ್ರದರ್ಶನವನ್ನು ಕಳೆಗಟ್ಟಿಸಿದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಈ ಪ್ರಶಸ್ತಿಯನ್ನು ಜ.30ರಂದು ಕುಂದಾಪುರದ ಬೋರ್ಡ್ ಹೈಸ್ಕೂಲಿನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ  ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು.
ಕಲಾಕ್ಷೇತ್ರ ಕುಂದಾಪುರ, ರೋಟರಿ ಕ್ಲಬ್ ವಲಯ 1ರ ಸಹಯೋಗದಲ್ಲಿ ಇಲ್ಲಿ ಜ.24ರಿಂದ. ಜ.30ರವರೆಗೆ ಯಕ್ಷಗಾನ ತಾಳಮದ್ದಳೆ ಸಪ್ತಾಹ ನಡೆಯಲಿದೆ. ಪ್ರತಿದಿನ ತೆಂಕು ಬಡಗಿನ ಖ್ಯಾತ ಕಲಾವಿದರು ಹಿಮ್ಮೇಳ ಮುಮ್ಮೇಳದಲ್ಲಿ ಭಾಗವಹಿಸಲಿದ್ದಾರೆ. ಭಾಗವತ ಸುಬ್ರಹ್ಮಣ್ಯ  ಧಾರೇಶ್ವರ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.