ಚಾರ್ಮಾಡಿ: ಚಾರ್ಮಾಡಿ ಗ್ರಾ.ಪಂ ನಲ್ಲಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಸಲುವಾಗಿ “ಮಹಿಳಾ ಕಾಯಕ ಶಕ್ತಿ ಅಭಿಯಾನ” ಕ್ಕೆ ಚಾಲನೆ ನೀಡಿ ಮಹಿಳೆಯರಿಗಾಗಿ ಉದ್ಯೋಗ ಖಾತರಿ ಯೋಜನೆಯಡಿ ಕೈಗೆತ್ತಿಕೊಳ್ಳಬಹುದಾದ ಕಾಮಗಾರಿಗಳ ಕುರಿತು ಹಾಗೂ ನರೇಗಾ ಯೋಜನೆಯಡಿ ಸ್ವಸಹಾಯ ಸಂಘದ ಸದಸ್ಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಬಗ್ಗೆ ಮಾಹಿತಿಯನ್ನು ನೀಡಿ ಜ.15ರಿಂದ ಮಾರ್ಚ್ 15ರವರೆಗೆ ಅಭಿಯಾನವನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು. ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರು ಹಾಗೂ ತಾಲೂಕು ಸಂಯೋಜಕರಾದ ಜಯಾನಂದ ಹಾಗೂ ಪಂಚಾಯತ್ ಅಭಿವೃದ್ಧಿ ಪ್ರಕಾಶ್ ಶೆಟ್ಟಿ ನೊಚ್ಚ ಇವರು ಮಹಿಳಾ ಕಾಯಕ ಶಕ್ತಿ ಅಭಿಯಾನದ ಬಗ್ಗೆ ಮಾಹಿತಿಯನ್ನು ನೀಡಿ ಚಾರ್ಮಾಡಿ ಗ್ರಾಮ ಪಂಚಾಯತ್ನಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಿ ಚಾರ್ಮಾಡಿ ಗ್ರಾಮ ಪಂಚಾಯತ್ನ್ನು ಮಾದರಿ ಗ್ರಾಮ ಪಂಚಾಯತನ್ನಾಗಿ ಮಾಡುವಲ್ಲಿ ಸಹಕಾರ ನೀಡುವಂತೆ ಕೋರಿದರು.
ಪಂಚಾಯತ್ನ ನೂತನ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಹಿಳೆಯರು ಭಾಗವಹಿಸಿದ್ದರು.