ಮುಂಡಾಜೆ: ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಾಜೆಯಲ್ಲಿ ಕೋವಿಡ್-19ಲಸಿಕಾ ವಿತರಣಾ ಕಾರ್ಯಕ್ರಮವು ಜ.22 ರಂದು ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿರವರು ದೀಪ ಪ್ರಜ್ವಲಿಸಿ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕಾವ್ಯ ವೈಪನ ರವರು ಲಸಿಕೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ ವರ್ಗದವರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.