ಉಜಿರೆ: ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿಗಳಿಗಾಗಿ ಕೋವಿಶಿಲ್ಡ್ ಲಸಿಕೆ ವಿತರಣಾ ಕಾರ್ಯಕ್ರಮ ಜರುಗಿತು.
ಇತರರಿಗೆ ಇರುವ ಅಪನಂಬಿಕೆ ಹಾಗೂ ಭಯವನ್ನು ಹೋಗಲಾಡಿಸಲು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲಕೃಷ್ಣ ರವರೇ ಸ್ವ ಉತ್ಸಾಹದಿಂದ ಮೊದಲ ಲಸಿಕೆಯನ್ನು ತೆಗೆದುಕೊಂಡು ಮಾದರಿಯಾದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಕಲಾಮಾಧು , ಉಜಿರೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯೆ ಡಾ ಅರ್ಚನಾ , ಮುಂಡಾಜೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯೆ ಡಾ. ಕಾವ್ಯ, ಅಳದಂಗಡಿ ಆರೋಗ್ಯ ಕೇಂದ್ರದ ವೈದ್ಯೆ ಡಾ|ಚೈತ್ರ ಮತ್ತು ಇತರ ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು
ಆಸ್ಪತ್ರೆಯ ವೈದ್ಯರು ಹಾಗು ಆರೋಗ್ಯ ಸಿಬ್ಬಂದಿಗಳು ಸೇರಿ ಒಟ್ಟು 83 ಜನರಿಗೆ ಲಸಿಕೆಯನ್ನು ನೀಡಿದ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.