ಸವಣಾಲು ಪ್ರೌಢಶಾಲೆಯಲ್ಲಿ ನೇತಾಜಿ ಜನ್ಮ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮೇಲಂತಬೆಟ್ಟು: ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ ಸವಣಾಲು ಇದರ ನೇತಾಜಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನೇತಾಜಿ ಜನ್ಮ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಜ.23 ರಂದು ಶಾಲಾ ವಠಾರದಲ್ಲಿ ಜರುಗಿತು.
ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ನಿವೃತ್ತ ಸಮನ್ವಯಾಧಿಕಾರಿ ಗಣೇಶ್ ಐತಾಳ್, ಶಿರ್ಲಾಲು ಕ್ಷೇತ್ರದ ತಾ.ಪಂ ಸದಸ್ಯೆ ಜಯಶೀಲ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷ ಮೋನಪ್ಪ ಗೌಡ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಮಂಜನಾಯ್ಕ್ ಟಿ.ಎನ್, ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್, ಸಹಶಿಕ್ಷಕ ಉದಯ ಶೇರಿಗಾರ್, ಸಹಶಿಕ್ಷಕಿ ಸಂಧ್ಯಾ ಹಾಗೂ ೨೦೨೦ ರ ಗ್ರಾ.ಪಂ ಚುನಾವಣೆಯಲ್ಲಿ ವಿಜೇತರಾದ ಸವಣಾಲು ಗ್ರಾಮದ ಗ್ರಾ.ಪಂ ಸದಸ್ಯರಿಗೆ ಅಭಿನಂದಿಸಿ, ಗೌರವಿಸಲಾಯಿತು.

ನೇತಾಜಿ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.