ವೇಣೂರು: ಇಲ್ಲಿಯ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಎನ್ನೆಸ್ಸೆಸ್ ಸಹಕಾರದೊಂದಿಗೆ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ಜ.23 ರಂದು ಪರಾಕ್ರಮದ ದಿನವನ್ನಾಗಿ ಶಾಲೆಯ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿರಿಯ ಶಿಕ್ಷಕ ಸುಕೇಶ್ ಕೆ. ಅವರು ವಹಿಸಿ, ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಅಬ್ಬರಿಸಿ ದೇಶಪ್ರೇಮದ ಕಿಚ್ಚನ್ನು ಜಾಗೃತಿಗೊಳಿಸಿದವರು ನೇತಾಜಿ ಸುಭಾಷ್ಚಂದ್ರ ಬೋಸ್ ಅವರು. ಅವರ ತ್ಯಾಗ, ದೇಶಪ್ರೇಮವನ್ನು ವಿದ್ಯಾರ್ಥಿಗಳು ಮೈಗೂಡಿಕೊಳ್ಳಬೇಕೆಂದು ಕರೆ ನೀಡಿದರು.
ಶಿಕ್ಷಕಿ ಸುಶೀಲ ಜಿ. ಅವರು ನೇತಾಜಿಯವರ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಶಿಕ್ಷಕಿ ಭವಾನಿ, ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ರವೀಂದ್ರ ಕೆ. ಉಪಸ್ಥಿತರಿದ್ದರು.