ವೇಣೂರು: ಕುಕ್ಕೇಡಿ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್ಡಿಎಂಸಿ ಸದಸ್ಯರಿಗೆ ಮಾಹಿತಿ ಕಾರ್ಯಾಗಾರವನ್ನು ಕುಕ್ಕೇಡಿ ಗ್ರಾ.ಪಂ. ಸದಸ್ಯ ಗೋಪಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾಗೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಉಪಾಧ್ಯಕ್ಷೆ ಶೋಭಾ, ನಿಟ್ಟಡೆ ಕ್ಲಸ್ಟರ್ ಸಿಆರ್ಪಿ ಆರತಿ, ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಕಿಯರಾದ ಜೋವಿಟಾ ಡಿಸೋಜ, ಪ್ಲೇವಿಯಾ ಡಿಸೋಜ ಭಾಗವಹಿಸಿದ್ದರು.
ಗ್ರಾ.ಪಂ.ನ ನೂತನ ಸದಸ್ಯ ಗೋಪಾಲಕೃಷ್ಣ ಶೆಟ್ಟಿ ಹಾಗೂ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಆರತಿ ಇವರನ್ನು ಸನ್ಮಾನಿಸಲಾಯಿತು. ಪ್ರಭಾರ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ಶಿಕ್ಷಕ ಸತೀಶ್ ನಿರೂಪಿಸಿ, ಶಿಕ್ಷಕಿ ಭಾಗ್ಯ ಜಿ.ಎಂ. ವಂದಿಸಿದರು.