ಕಳೆಂಜ: ಇಲ್ಲಿಯ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.16 ರಿಂದ 21ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜ ಜ.23 ರಂದು ಬಿಡುಗಡೆಗೊಳಿಸಿದರು.
ಧರ್ಮಸ್ಥಳ ಕ್ಷೇತ್ರದ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ ರವರು ಬ್ರಹ್ಮಕಲಶೋತ್ಸವದ ರಶೀದಿ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ತಾ.ಪಂ ಸದಸ್ಯೆ ಸುಶೀಲಾ, ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು, ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ನವೀಕರಣ ಸಮಿತಿಯ ಸದಸ್ಯರು, ಊರ ಭಕ್ತಾಧಿಗಳು ಉಪಸ್ಥಿತರಿದ್ದರು.