ಧರ್ಮಸ್ಥಳ: ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಂಗಳೂರು, ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಜ.31 ರಂದು ಕಡಬದ ಕೊಂಬಾರು ಹಿ.ಪ್ರಾ ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಜ.23 ರಂದು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ ಬಿ.ಎನ್, ಸದಸ್ಯರಾದ ಭಾಸ್ಕರ ರೈ ಕಟ್ಟ, ಅತಿಥೇಯ ಕಡಬದ ಅಧ್ಯಕ್ಷ ನಾಗರಾಜ ಎನ್.ಕೆ, ಸ್ಥಾಪಕಾಧ್ಯಕ್ಷ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್ ಪೆರ್ಲ, ಬೆಳ್ತಂಗಡಿ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಾರಪ್ಪ ಪೂಜಾರಿ ಬೆಳಾಲು, ಸದಸ್ಯರಾದ ಆರ್.ಎನ್ ಪೂವಣಿ, ಧನಕೀರ್ತಿ ಆರಿಗ ಮೊದಲಾದವರು ಉಪಸ್ಥಿತರಿದ್ದರು.