ಕಕ್ಕಿಂಜೆ: ಇಲ್ಲಿಯ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕಾ ಕಾರ್ಯಕ್ರಮವು ಜ.25ರಂದು ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯರಾದ ಡಾ| ಮುರಳಿಕೃಷ್ಣ ಇರ್ವತ್ರಾಯ, ಡಾ| ವಂದನಾ ಎಂ ಇರ್ವತ್ರಾಯ, ಆಸ್ಪತ್ರೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.