ಬಂದಾರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಘಟನೆ ಬಂದಾರು ಗ್ರಾಮದ ಪುಂಡೈ ಎಂಬಲ್ಲಿ ನಡೆದಿದೆ
ಬಂದಾರು ಗ್ರಾಮದ ಪುಂಡೈ ಬನ ಮನೆಯ ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಆಕೆಯ ಸಂಬಂಧಿ ಪ್ರವೀಣ್ ಎಂಬಾತನು ಅಕ್ರಮ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಬಾಲಕಿಯ ಮನೆಯವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸರು ಆರೋಪಿ ಪ್ರವೀಣ್ ಎಂಬಾತನನ್ನು ಬಂಧಿಸಿ, ಫೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.