ಕೊಯ್ಯೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸದಸ್ಯರಿಗೆ ಹಾಗೂ ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕರಾಗಿ ಆಯ್ಕೆಗೊಂಡಿರುವ ಪಕ್ಷದ ಸದಸ್ಯರಿಗೆ, ಹಾಗೂ ಮತದಾರ ಬಾಂಧವರಿಗೆ ಅಭಿನಂದನಾ ಕಾರ್ಯಕ್ರಮವು ಜ.25 ರಂದು ಕೊಯ್ಯೂರು ಆದೂರು ಪೆರಾಲ್ ಶ್ರೀ ಪಂಚದುರ್ಗಾ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ಉದ್ಘಾಟಿಸಿದರು. ಕೊಯ್ಯೂರು ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಲೋಕೇಶ ಗೌಡ ಪಾಂಬೇಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಕೆ ವಸಂತ ಬಂಗೇರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ, ದ.ಕ ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ ನಿರಂಜನ್ ಕುಮಾರ್ ಬಾವಂತಬೆಟ್ಟು, ತಾ.ಪಂ ಸದಸ್ಯ ಪ್ರವೀಣ್ ಗೌಡ, ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಉಜ್ವಲ್ ಕುಮಾರ್, ಪ್ರಮುಖರಾದ ರಾಜಶೇಖರ್ ಅಜ್ರಿ, ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ಕೊಯ್ಯೂರು ಕಾಂಗ್ರೆಸ್ ಗ್ರಾಮ ಸಮಿತಿಯ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.