ಬೆಳ್ತಂಗಡಿಯಲ್ಲಿ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಪರಿಯೋಜನೆಯಡಿಯಲ್ಲಿ ಬೆಳ್ತಂಗಡಿಯ ಎಸ್‌ಬಿಐ ಬ್ಯಾಂಕ್ ಬಳಿ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಜ.25 ರಂದು ಶಾಸಕ ಹರಿಶ್ ಪೂಂಜ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರಕಾರ ಜನರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ್ದು, ಜನರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಿ ನೀಡುವ ಸಲುವಾಗಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಅಲ್ಲಲ್ಲಿ ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಕೆ. ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ.ಧನಂಜಯ ರಾವ್, ಜನ ಔಷಧಿ ಪರಿಯೋಜನೆಯ ನೋಡಲ್ ಅಧಿಕಾರಿ ಡಾ. ಅನಿಲಾ ದೀಪಕ್ ಶೆಟ್ಟಿ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.