ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಇಲ್ಲಿನ ಮಿನಿ ವಿಧಾನ ಸೌಧ ಆವರಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದ ಜ. 26ರಂದು ಜರುಗಿತು.
ಬೆಳ್ತಂಗಡಿ ಪ್ರಭಾರ ತಹಶೀಲ್ದಾರರಾದ ರಮೇಶ್ ಬಾಬು ರವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ನ.ಪಂ. ಅಧ್ಯಕ್ಷೆ ರಜನಿ ಕುಡ್ವ, ನ.ಪಂ ಸದಸ್ಯೆ ತುಳಸಿ, ಆರೋಗ್ಯಾಧಿಕಾರಿ ಕಲಾಮಧು ಶೆಟ್ಟಿ,
ನಿವೃತ್ತ ಸೇನಾನಿ ಎಂ.ಆರ್ ಜೈನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಿಯಾ ಆಗ್ನೇಸ್, ಬಿಇಒ ತಾರಾಕೇಸರಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಶಿವಪ್ರಸಾದ್ ಅಜಿಲ, ಉಪ ತಹಶಿಲ್ದಾರರಾದ ರವಿ, ಶಂಕರ್, ಸೂರ್ಯ ನಾರಾಯಣ ರಾವ್, ರಂಜಿತ್, ಸುಭಾಷ್ ಜಾದವ್, ಸಮಾಜ ಕಲ್ಯಾಣಾಧಿಕಾರಿಗಳು , ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.