ತುಳುಕೂಟ ಬೆಂಗಳೂರು ಅಧ್ಯಕ್ಷರಾಗಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕಳೆದ ಅನೇಕ ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಸಂಘ ಸಂಸ್ಥೆಗಳ ಏಳಿಗೆಗಾಗಿ ನಿಸ್ವಾರ್ಥವಾಗಿ ದುಡಿದು ಪ್ರತಿಷ್ಠಿತ ತುಳುಕೂಟ ಬೆಂಗಳೂರು ಇದರ ಅಧ್ಯಕ್ಷರಾಗಿ, ಕೈಗಾರಿಕೋದ್ಯಮಿ, ಕರ್ನಾಟಕ ಸರಕಾರದ ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿರುವ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2022ರಲ್ಲಿ ತುಳುಕೂಟ ಬೆಂಗಳೂರು ಸಂಸ್ಥೆಗೆ 50 ವರ್ಷ ತುಂಬುತ್ತಿದ್ದು ಸುವರ್ಣ ಮಹೋತ್ಸವದ ಆಚರಣೆಯ ಜವಾಬ್ದಾರಿ ಹಾಗೂ ಕಾರ್ಯಕ್ರಮಗಳು ಇದರ ನೇತೃತ್ವದಲ್ಲಿ ನಡೆಯಲಿದೆ.
ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೋಕ್ತೆಸರರಾಗಿ, ರಾಷ್ಟ್ರೊತ್ತಾನ, ವಿದ್ಯಾಕೇಂದ್ರದ ಆಡಳಿತ ಮಂಡಳಿ ಸದಸ್ಯರಾಗಿ, ಬೆಂಗಳೂರು ರೋಟರಿ ಕ್ಲಬ್ ಸದಸ್ಯರಾಗಿ, ಇಂಡಿಯನ್ ಸಿವಿಲ್ ಡಿಫೆನ್ಸ್ ವಿಜಯನಗರ ಬೆಂಗಳೂರಿನಲ್ಲಿ ಸೆಕ್ಟರ್ ವಾರ್ಡನ್ ಆಗಿ, ಮೂಡಬಿದ್ರೆ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿ, ಹೆಗ್ಗಡೆ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೂ ಅಳದಂಗಡಿ ಅರಸರ ಪಟ್ಟಾಭಿಷೇಕದ ರಜತ ಸಂಭ್ರಮಾಚರಣೆಯ ಕಾರ್ಯಧ್ಯಕ್ಷರಾಗಿ ಕಾರ್ಯಕ್ರಮದ ಯಶಸ್ವಿಗೆ ಕಾರಣರಾಗಿದ್ದಾರೆ. ಇವರ ಸೇವೆಗಾಗಿ ಕಲಾಪೋಷಕ ಪ್ರಶಸ್ತಿ, ಹೆಮ್ಮೆಯ ಪುತ್ರ ಪ್ರಶಸ್ತಿ, ಭಾರತ ಬಂಧು, ಸ್ವಸ್ತಿ ಶ್ರೀ ರಾಜ್ಯ ಪ್ರಶಸ್ತಿ ದೊರೆತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.