ಉಜಿರೆ: ಕರ್ನಾಟಕ ರಾಜ್ಯದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ಜ.26 ರಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಿದರು.
ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಅವರನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಅವರು ಜ.27 ರಂದು ಬೆಳಿಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.