ಓಡಿಲ್ನಾಳ: ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥ ಮಂಟಪದ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  

ಓಡಿಲ್ನಾಳ: ಇಲ್ಲಿಯ ಶ್ರೀ ಕ್ಷೇತ್ರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿ ಮತ್ತು ತೀರ್ಥಮಂಟಪದ ಶಿಲಾನ್ಯಾಸ ಸಮಾರಂಭವು ಆಲಂಬಾಡಿ ಪದ್ಮನಾಭ ತಂತ್ರಿ ನೀಲೇಶ್ವರ ರವರ ನೇತೃತ್ವದಲ್ಲಿ ಜ.28 ರಂದು ಜರುಗಿತು.


ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಉದ್ಯಮಿ ಹಾಗೂ ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ ಶೆಟ್ಟಿ ಉಪಸ್ಥಿತರಿದ್ದು ಶಿಲಾನ್ಯಾಸ ನೆರವೇರಿಸಿದರು.


ಮಾಜಿ ಶಾಸಕ ಕೆ ವಸಂತ ಬಂಗೇರ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

   

ಈ ಸಂದರ್ಭದಲ್ಲಿ ಕುವೆಟ್ಟು ಕ್ಷೇತ್ರದ ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಬೆಳಾಲು ಮಾಯಾ ಮಹಾದೇವ ದೇವಸ್ಥಾನದ ಮಾಜಿ ಆಡಳಿತಾಧಿಕಾರಿ ಹಾಗೂ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಓಡಿಲ್ನಾಳ ಧರ್ಮೋತ್ಥಾನ ಟ್ರಸ್ಟ್ ಅಧ್ಯಕ್ಷ ವೃಷಭ ಆರಿಗ, ಕಾರ್ಯಾಧ್ಯಕ್ಷ ಜಯರಾಮ್ ಎಸ್ ಶೆಟ್ಟಿ, ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಕೇದೆ, ಪವಿತ್ರಪಾಣಿ ಮೋಹನ ಕೆರ್ಮುಣ್ಣಾಯ, ತಾ.ಪಂ ಸದಸ್ಯ ಗೋಪಿನಾಥ ನಾಯಕ್, ಕುವೆಟ್ಟು ಗ್ರಾ.ಪಂ ಸದಸ್ಯರು, ಊರಿನ ಗಣ್ಯರು, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮತ್ತು ಬೈಲು ಸಮಿತಿ ಸರ್ವಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.