ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  

ಉಜಿರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮ ಪಂಚಾಯತ್ ಉಜಿರೆ ಹಾಗೂ ಪತ್ರಿಕೋದ್ಯಮ ವಿಭಾಗ ಎಸ್‌ಡಿಎಂ ಕಾಲೇಜು ಉಜಿರೆ ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮವು ಉಜಿರೆ ಶ್ರೀ ಧ.ಮಂ ಕಾಲೇಜಿನ ಇಂದ್ರಪ್ರಸ್ಥ ಒಳ ಕ್ರೀಡಾಂಗಣದಲ್ಲಿ ಜ.28ರಂದು ಜರುಗಿತು.


ಉಜಿರೆ ಶ್ರೀ ಧ.ಮಂ ಕಾಲೇಜಿನ ಪ್ರಾಂಶುಪಾಲ ಡಾ.ಎಸ್ ಸತೀಶ್ಚಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪ್ರಿಯಾ ಆಗ್ನೆಸ್, ಉಜಿರೆ ಗ್ರಾ.ಪಂ ಆಡಳಿತಾಧಿಕಾರಿ ಡಾ. ಯತೀಶ್ ಎಂ.ಎಸ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಸಿಡಬ್ಲ್ಯುಬಿ ಕನ್ಸಲ್ಟೆಂಟ್ ಮನೋರಮಾ ಮಾಹಿತಿ ನೀಡಿದರು.


ಕಾಲೇಜು ವಿದ್ಯಾರ್ಥಿನಿ ಕು| ಅನಘ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗ್ಡೆ ಸ್ವಾಗತಿಸಿ, ಪ್ರಾಸ್ತಾವಿಸಿದರು. ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ ಹೆಚ್ ವಂದಿಸಿದರು. ವಿದ್ಯಾರ್ಥಿನಿ ವಿಧಾತ್ರಿ ಭಟ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.