ಬೆಳ್ತಂಗಡಿ: ತಾಲೂಕು ತೋಟಗಾರಿಕಾ ಇಲಾಖೆಯಿಂದ 2020-21ನೇ ಸಾಲಿನ ಕೇಂದ್ರ ಪುರಸ್ಕೃತ ಸಾಮರ್ಥ್ಯವುಳ್ಳ ರಾಜ್ಯಗಳಲ್ಲಿ ಎಣ್ಣೆ ತಾಳೆ ವ್ಯವಸಾಯ ಯೋಜನೆಯಡಿ ಯಾಂತ್ರೀಕರಣ ಕಾರ್ಯಕ್ರಮದಡಿ ಅರ್ಹ ಎಂಟು ರೈತ ಫಲಾನುಭವಿಗಳಿಗೆ (ಆಯಿಲ್ ಪಾಲ್ಮ್ ಮೋಟೋರೈಸ್ಡ್ ಚಿಸೆಲ್) ಯಂತ್ರೋಪಕರಣಗಳ ವಿತರಣಾ ಕಾರ್ಯಕ್ರಮವು ಜ.28ರಂದು ಜರುಗಿತು.
ಶಾಸಕ ಹರೀಶ್ ಪೂಂಜ ಅರ್ಹ ಫಲಾನುಭವಿಗಳಿಗೆ ಯಂತ್ರೋಪಕರಣ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್ ಚಂದ್ರಶೇಖರ, ಸಹಾಯಕ ತೋಟಗಾರಿಕಾ ನಿರ್ದೇಶಕ ಸಂಜೀವ, ಸಹಾಯಕ ತೋಟಗಾರಿಕಾ ಅಧಿಕಾರಿಗಳಾದ ಭೀಮರಾಯ ಸೊಡ್ಡಗಿ, ಮಲ್ಲಿನಾಥ ಬಿರಾದಾರ ಹಾಗೂ ರೈತ ಫಲಾನುಭವಿಗಳು ಉಪಸ್ಥಿತರಿದ್ದರು.