ಮಚ್ಚಿನ: ಇಲ್ಲಿಯ ಬಳ್ಳಮಂಜ ನಿವಾಸಿ, ಹೊಟೇಲ್ ಉದ್ಯಮಿ ಗುರುಪ್ರಸಾದ್ ಭಟ್(64.ವ) ರವರು ಅಲ್ಪಕಾಲದ ಅಸೌಖ್ಯದಿಂದ ಜ.29ರಂದು ಬೆಳಿಗ್ಗೆ ನಿಧನರಾದರು.
ಇವರು ಆರ್ ಎಸ್ ಎಸ್ ಮತ್ತು ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದು, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿ, ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ದೇವರಗುಂಡಿ ಸತ್ಯನಾರಾಯಣ ಪೂಜಾ ಸಮಿತಿ ಸ್ಥಾಪಕಾಧ್ಯಕ್ಷರಾಗಿ, ಮಚ್ಚಿನ ತುಳು ಶಿವಳ್ಳಿ ಬ್ರಾಹ್ಮಣ ಸಭಾದ ವಲಯಾಧ್ಯಕ್ಷರಾಗಿ, ಬಳ್ಳಮಂಜ ಶ್ರೀ ಅನಂತೇಶ್ವರ ಕಂಬಳ ಸಮಿತಿಯ ಮಾಜಿ ಕಾರ್ಯದರ್ಶಿಯಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಇವರು ಕೃಷಿಕರಾಗಿದ್ದು, ಬಳ್ಳಮಂಜ ಹಾಗೂ ಮಡಂತ್ಯಾರಿನಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಮೃತರು ತಾಯಿ, ಪತ್ನಿ ವಿದ್ಯಾ, ಓರ್ವ ಪುತ್ರ ಉದಯ ಭಟ್ , ಓರ್ವ ಪುತ್ರಿ ವಿನಯ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.