ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಎ.ಸಿ ಯತೀಶ್ ಉಲ್ಲಾಳ್ ಭೇಟಿ
ಮಲವಂತಿಗೆ: ಬಂಗಾರಪಲ್ಕೆ ಬಡಮನೆ ಅಬ್ಬಿ ಜಲಪಾತ ವೀಕ್ಷಣೆ ಮಾಡುತ್ತಿದ್ದ ನಾಲ್ವರ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಮಣ್ಣಿನಡಿ ಸಿಲುಕಿ ನಾಪತ್ತೆಯಾದ ವಿದ್ಯಾರ್ಥಿ ಸನತ್ ರವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ರವರು ಪ್ರತಿದಿನ ಶೋಧ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೆ ಸನತ್ ರವರ ಮನೆಗೆ ಭೇಟಿ ನೀಡಿ ಸನತ್ ಹೆತ್ತವರಿಗೆ ಧೈರ್ಯ ತುಂಬಿದ್ದಾರೆ.
ಜ.28 ರಂದು ಶಾಸಕ ಹರೀಶ್ ಪೂಂಜ ರವರು ಪುತ್ತೂರು ಸಹಾಯಕ ಆಯುಕ್ತರಾದ ಯತೀಶ್ ಉಲ್ಲಾಳ್ ರವರ ಜೊತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳೊಂದಿಗೆ ಕಾರ್ಯಾಚರಣೆ ಬಗ್ಗೆ ಚರ್ಚಿಸಿದರು.
ರಾಜ್ಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಪೊಲೀಸರು, ಅರಣ್ಯ, ಕಂದಾಯ ಸೇರಿದಂತೆ ಸಂಘ-ಸಂಸ್ಥೆಯವರು ಸ್ಥಳೀಯರು ನಡೆಸುತ್ತಿರುವ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ವಿಪತ್ತು ನಿರ್ವಹಣಾ ತಂಡ ಹಾಗೂ ಇತರು ಸೇರಿ ನಡೆಸುತ್ತಿರುವ ಕಾರ್ಯಾಚರಣೆಯ ಯಶಸ್ವಿಯಾಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಎ.ಸಿ ಯತೀಶ್ ಉಲ್ಲಾಳ್ ರವರು ಮಾತನಾಡಿ ಕಂಪ್ರೆಸರ್, ಕ್ರಷರ್ ಬ್ರೇಕರ್ ಸಹಾಯದಿಂದ ಬಂಡೆ ಒಡೆಯುವ ಕೆಲಸಕ್ಕೆ ತಯಾರಿ ನಡೆಸಲಾಗಿದ್ದು, ಈಗಾಗಲೇ ಕುಸಿತಗೊಂಡ ಪ್ರದೇಶದಲ್ಲಿ ಇನ್ನಷ್ಟು ಮಣ್ಣು ಕುಸಿದು ಬೀಳುವ ಭೀತಿ ಎದುರಾಗಿದೆ. ಬಹಳ ಎಚ್ಚರಿಕೆಯಿಂದ ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಉದ್ಯಮಿ ಶಶಿಧರ ಶೆಟ್ಟಿ ಬರೋಡಾ, ರಾಜೇಶ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಬೆಳ್ತಂಗಡಿಯ ಪ್ರಭಾರ ತಹಶೀಲ್ದಾರ್ ರಮೇಶ್ ಬಾಬು, ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ, ಎಸ್.ಐ ನಂದಕುಮಾರ್, ಮಲವಂತಿಗೆ ಗ್ರಾಮಕರಣಿಕ ರಾಘವೇಂದ್ರ, ಸಹಾಯಕ ಮಂಜುನಾಥ್, ಗ್ರಾ.ಪಂ ಸದಸ್ಯ ಪ್ರಕಾಶ್ ಕುಮಾರ್ ಜೈನ್, ಆರ್.ಐ ಪ್ರತಿಕ್ ಉಪಸ್ಥಿತರಿದ್ದರು
ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಯವರ ತಂಡದಿಂದ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ, ಇತರ ಸಂಘ ಸಂಸ್ಥೆಯವರಿಂದ ಮಣ್ಣು, ಮರ ತೆಗೆಯುವ, ಬಂಡೆ ಒಡೆಯುವ ಕಾರ್ಯ ನಡೆಯುತ್ತಿದೆ.