ಮರೋಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲ್ಲೂಕಿನ ಆಲಡೆ ಕ್ಷೇತ್ರ ಮರೋಡಿ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ಜ.28 ರಂದು ಚಾಲನೆ ದೊರಕಿದ್ದು, ಫೆ.1ರ ತನಕ ವಿಜೃಂಭಣೆಯಿಂದ ಜರುಗಲಿದೆ.

ಜ.28 ರಂದು ರಾತ್ರಿ ವಾಸ್ತುರಕ್ಷೋಘ್ನ ನಡೆಯಿತು. 29ರಂದು ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಹೊರೆಕಾಣಿಕೆ ಸಮರ್ಪಣೆ, ಧ್ವಜರೋಹಣ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ದೊಡ್ಡ ರಂಗಪೂಜೆ, ಬಲಿ ಉತ್ಸವ, ವ್ಯಾಘ್ರಚಾಮುಂಡಿ ಸಹಿತ ರಕ್ತೇಶ್ವರಿ ಮೈಸಂದಾಯ ದೈವಗಳಿಗೆ ಗಗ್ಗರಸೇವೆ ನಡೆಯಿತು. ಹಳೆಯಂಗಡಿ ಪಾವಂಜೆ ಮೇಳದವರಿಂದ ಪಟ್ಲ ಸತೀಶ್‌ ಶೆಟ್ಟಿ ಅವರ ಭಾಗವತಿಗೆಯೊಂದಿಗೆ ದಕ್ಷ ಯಜ್ಞ- ಷಣ್ಮುಖ ವಿಜಯ ಯಕ್ಷಗಾನ ಪ್ರದರ್ಶನ ನಡೆಯಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಆಡಳಿತ ಮಂಡಳಿಯ ಕಾರ್ಯದರ್ಶಿ ಜಯಂತ ಕೋಟ್ಯಾನ್, ಮೊಕ್ತೇಸರರಾದ ವಿಜಯ ಆರಿಗ, ರತ್ನಾಕರ ಬುಣ್ಣಾನ್, ಅಣ್ಣಪ್ಪ ಹೆಗ್ಡೆ, ವಿಜಯಕುಮಾರ್ ಬಂಗ, ಸುರೇಂದ್ರ ಸಾಲ್ಯಾನ್, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಪ್ರಸಾದ್ ಮತ್ತಿತರರು ಇದ್ದರು.

30ರಂದು ಬೆಳಿಗ್ಗೆ ಆಶ್ಲೇಷ ಬಲಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಆಶ್ರಯದಲ್ಲಿ ಸಂಜೆ 5ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು 8ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅಧ್ಯಕ್ಷತೆ ವಹಿಸುವರು. ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಯಶವಂತ ಎಸ್‌, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್‌ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಬಲಿ ಉತ್ಸವ, ಶ್ರೀಭೂತಬಲಿ, ಪಟ್ಟದ ಪಂಜುರ್ಲಿ ಮತ್ತು ಕಲ್ಕುಡ ದೈವಗಳ ನೇಮೋತ್ಸವ ನಡೆಯಲಿದೆ. ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ಸಹಭಾಗಿತ್ವದಲ್ಲಿ ತುಳು ನಾಟಕ ‘ಕಾಲ ಕಲ್ಜಿಗ’ ಪ್ರದರ್ಶನವಿದೆ.

31ರಂದು ಕಲಶಾಭಿಷೇಕ, ತುಲಾಭಾರ ಸೇವೆ, ಚೂರ್ಣೋತ್ಸವ, ಬಟ್ಟಲು ಕಾಣಿಕೆ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಯಾತ್ರಾಹೋಮ, ಬಲಿ ಉತ್ಸವ, ಕುಮಾರ ದರ್ಶನ, ಕೊಡಮಣಿತ್ತಾಯ ದೈವದ ನೇಮ, ದೈವದೇವರ ಭೇಟಿ, ಅವಭೃತ ಸ್ನಾನ, ಧ್ವಜಾವರೋಹಣ ನಡೆಯಲಿದೆ. ಸ್ಥಳೀಯ ಪ್ರತಿಭೆಗಳಿಂದ ಹಾಗೂ ಅರುಣೋದಯ ಯುವಕ ಮಂಡಲ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕಲ್ಲಡ್ಕ ವಿಠ್ಠಲ ನಾಯಕ್‌ ತಂಡದಿಂದ ಗೀತ– ಸಾಹಿತ್ಯ– ಸಂಭ್ರಮ ನಡೆಯಲಿದೆ. ಫೆ. 1ರಂದು ಸಂಪ್ರೋಕ್ಷಣೆ ನಡೆಯಲಿದೆ.

ವರ್ಷಾಂಪ್ರತಿ ನಡೆಯುವ ಜಾತ್ರೆ ಸಂದರ್ಭದಲ್ಲಿ ಇಲ್ಲಿ ಸಿರಿಗಳ ಜಾತ್ರೆ ನಡೆಯುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕೇರಳ ಮತ್ತಿತರ ಕಡೆಗಳಿಂದ ಸಾವಿರಾರು ಭಕ್ತರ ಆರಾಧನಾ ಕ್ಷೇತ್ರವೂ ಹೌದು. ಆಲಡೆಯ ಸಂಬಂಧವನ್ನು ಹೊಂದಿರುವ ಕುಟುಂಬಗಳು ಈ ಕ್ಷೇತ್ರಕ್ಕೆ ಬಂದು ಹುರುಳಿ ಹಾಗೂ ಇತರೆ ಧಾನ್ಯವನ್ನು ಹರಕೆಯ ರೂಪದಲ್ಲಿ ಸಲ್ಲಿಸಿ, ತಮ್ಮ ಕಷ್ಟ ನಿವಾರಣೆಗೆ ದೇವರಲ್ಲಿ ಪ್ರಾರ್ಥಿಸುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.