ಸತತ ನಾಲ್ಕನೇ ದಿನ ಕಾರ್ಯಾಚರಣೆಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ತಂಡ ಭಾಗಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಬಂಗಾರಪಳಿಕೆ ಬಡಮನೆ ಅಬ್ಬಿ ಜಲಪಾತದಲ್ಲಿ ಗುಡ್ಡ ಕುಸಿತದಿಂದ ಉಜಿರೆಯ ವಿದ್ಯಾರ್ಥಿ ಸನತ್ ಶೆಟ್ಟಿ ರವರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದು ಇಂದಿಗೆ(ಜ.30) ಐದು ದಿನಗಳಾಗಿದ್ದು, ವಿದ್ಯಾರ್ಥಿ ಪತ್ತೆಗಾಗಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ತಂಡದವರಿಂದ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡ, ವಿವಿಧ ಸಂಘ-ಸಂಸ್ಥೆಯವರು, ಸ್ಥಳೀಯರು ಸೇರಿ ಸುಮಾರು 200ಕ್ಕೂ ಹೆಚ್ಚು ಮಂದಿ ಜ.29 ರಂದು ನಡೆದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.


ಕಂಪ್ರೆಸರ್, ಕ್ರಷರ್ ಬ್ರೇಕರ್ ಸಹಾಯದಿಂದ ಬಂಡೆ ಒಡೆಯುವ ಕೆಲಸ ನಡೆಯುತ್ತಿದ್ದು, ಬೆಳ್ತಂಗಡಿ ಎಸ್.ಐ ನಂದಕುಮಾರ್ ಮತ್ತು ಅವರ ತಂಡ, ಅರಣ್ಯ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದು ಕಾರ್ಯಾಚರಣೆಯಲ್ಲಿ ಸಹಕರಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.