ತಾಲೂಕು ಪ.ಜಾತಿ/ಪ.ಪಂಗಡ ಸಮುದಾಯದ ಕುಂದು ಕೊರತೆಗಳ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ದ.ಕ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕುಂದು ಕೊರತೆಗಳ ಸಭೆಯು ಜ.30 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.
ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಲಾಯಿಲ ಗ್ರಾಮದ ಕರ್ನೋಡಿ ಶಾಲೆಯಲ್ಲಿ ಪ.ಜಾತಿ ಮಕ್ಕಳನ್ನು ಹೊರತು ಪಡಿಸಿ, ಉಳಿದ ಮಕ್ಕಳನ್ನು ಊಟಕ್ಕೆ ಕರೆದುಕೊಂಡು ಹೋದ ಪ್ರಕರಣದಲ್ಲಿ ಬಿ ರಿಪೋರ್ಟ್ ಆಗಿರುವುದನ್ನು ಆಕ್ಷೇಪಿಸಿ ಬೆಳ್ತಂಗಡಿ ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಶೇಖರ್ ಎಲ್ ಮತ್ತು ಚಂದು ಎಲ್ ಮಾತನಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್.ಪಿ ಲಕ್ಷ್ಮೀಪ್ರಸಾದ್ ರವರು ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವುದಾಗಿ ಭರವಸೆ ನೀಡಿದರು.


ಸಭೆಯಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಹಿರಿಯ ಪೋಲಿಸ್ ಅಧಿಕಾರಿಗಳು, ಇತರ ಇಲಾಖೆಯ ಅಧಿಕಾರಿಗಳು, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ  ಪದಾಧಿಕಾರಿಗಳು, ತಾಲೂಕಿನ ಪರಿಶಿಷ್ಟ ಜಾತಿ/ಪಂಗಡ ಸಮುದಾಯದ ಮುಖಂಡರುಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.