ಉಜಿರೆಯಲ್ಲಿ ನಡೆಯಲಿರುವ ಬಿಜೆಪಿ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಚಿವರು
ಉಜಿರೆ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃಧ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ರವರು ನಾಳೆ(ಜ.31) ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದಂತಹ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತಿಯ ಜನತಾ ಪಾರ್ಟಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿಯ ಎಲ್ಲಾ ಕಾರ್ಯಕರ್ತರಿಗೆ, ಮತದಾರ ಬಂಧುಗಳಿಗೆ, ಚುನಾವಣೆಯಲ್ಲಿ ಸ್ವರ್ಧಿಸಿ ಗೆದ್ದಿರುವ ಹಾಗೂ ಸೋತಿರುವ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜ.31 ರಂದು ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯ ಸಚಿವ ಈಶ್ವರಪ್ಪರವರು ಭಾಗವಹಿಸಿ ದಿಕ್ಸೂಚಿ ಭಾಷಣವನ್ನು ಮಾಡಲಿದ್ದಾರೆ .
ಬೆಳ್ತಂಗಡಿ ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ್ ಕೊಟ್ಯಾನ್ ರವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಚಿವರಾದ ಅಂಗಾರ ಸುಳ್ಯ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ಸಿಂಹ ನಾಯಕ್, ಕಿಯೋನೀಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮೊದಲಿಗೆ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ರತ್ನವರ್ಮ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದ್ದು, ಹಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕಾಗಿ ಶಾಸಕ ಹರೀಶ್ ಪೂಂಜ ವಿನಂತಿಸಿದ್ದಾರೆ.