ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಾರ್ಷಿಕ ಮಹಾಸಭೆ ಜ.30 ರಂದು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಜರುಗಿತು.


ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಬೆಳ್ತಂಗಡಿ ತಾಲೂಕಿನಲ್ಲಿ ನೂತನ ಗುರುಭವನ ನಿರ್ಮಿಸಿ, ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುವುದು. ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಸ್ಪಂದಿಸಲು ಸದಾ ಸಿದ್ಧವಿರುವುದಾಗಿ ನುಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್ ಎಸ್, ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಶಂಭು ಶಂಕರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗನ ಗೌಡ ಎಂ.ಎ, ಜಿಲ್ಲಾ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಪಿ.ಎಸ್, ಬೆಳ್ತಂಗಡಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ನಾರಾವಿ, ಸಂಘದ ಪದಾಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.


ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳ್ತಂಗಡಿ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರು ಹಾಗೂ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದು, ಕಾರ್ಯ ಕ್ರಮದ ಯಶಸ್ವಿಗೆ ಸಹಕರಿಸಿದರು.


ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶಾಸಕ ಹರೀಶ್ ಪೂಂಜರವರನ್ನು ಸನ್ಮಾನಿಸಿ ಗೌರವಿಸಲಾಯಿತು ಹಾಗೂ ನಿಕಟಪೂರ್ವ ಸಮಿತಿಯ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.