ಬೆಳ್ತಂಗಡಿ: ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಜಯಭೇರಿ ಗಳಿಸಲು ಕಾರಣೀಕರ್ತರಾದ ಕಾರ್ಯಕರ್ತರಿಗೆ, ನೂತನವಾಗಿ ಚುನಾಯಿತರಾದ ಸದಸ್ಯರುಗಳಿಗೆ, ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ನಡೆಯಲಿರುವ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಭವ್ಯವಾದ ಮೆರವಣಿಗೆ ನಡೆಯಿತು.
ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬಳಿಯಿಂದ ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣ ತನಕ ಉಜಿರೆಯ ಮುಖ್ಯ ಪೇಟೆಯಲ್ಲಿ ಮೆರವಣಿಗೆ ಜರುಗಿತು. ರಾಜ್ಯ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ರಾಜ್ ಸಚಿವ ಕೆ.ಎಸ್ ಈಶ್ವರಪ್ಪ, ಶಾಸಕ ಹರೀಶ್ ಪೂಂಜ, ಹರಿಕೃಷ್ಣ ಬಂಟ್ವಾಳ ಮೊದಲಾದರು ಉಜಿರೆ ಸಕ೯ಲ್ ನಲ್ಲಿ ಹಾಕಲಾದ ಸ್ಟೇಜ್ ನಲ್ಲಿ ಕೂತು ಮೆರವಣಿಗೆಯನ್ನು ವೀಕ್ಷಣೆ ಮಾಡಿ ದರು.
ತಾಲೂಕಿನ ೪೬ ಗ್ರಾಮ ಪಂಚಾಯತು ಬಿಜೆಪಿ ಬೆಂಬಲಿತ ನೂತನ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.