ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪೋಲಿಯೋ ಲಸಿಕೆ ಅಭಿಯಾನ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಆರೋಗ್ಯ ಇಲಾಖೆಯಿಂದ ಐದು ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ಪೋಲಿಯೋ ಲಸಿಕೆ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ರವರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜ.31 ರಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ರೋಟರಿ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ಪ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ ಟಿ, ಡಾ| ರತ್ನಾಕರ್, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ ಉಪಸ್ಥಿತರಿದ್ದರು.
ತಾಲೂಕಿನಲ್ಲಿ ಐದು ವರ್ಷದೊಳಗಿನ 19659ಮಕ್ಕಳಿದ್ದು, 165ಬೂತ್ ತೆರೆಯಲಾಗಿತ್ತು. ಅಂಗನವಾಡಿ ಸರಕಾರಿ ಆಸ್ಪತ್ರೆ, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ ಸಹಿತ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಲಸಿಕೆ ನೀಡಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು.
664 ವ್ಯಾಕ್ಸಿನೇಟರ್‌ಗಳನ್ನು ನಿಯೋಜಿಸಲಾಗಿದ್ದು, 33 ಮೇಲ್ವಿಚಾರಕರು, ಪ್ರತಿ ಮನೆ ಮನೆಗೆ ಭೇಟಿಗಾಗಿ 332 ಆಶಾ ಕಾರ್ಯಕರ್ತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೀಜಿಸಲಾಗಿತ್ತು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.