ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವ ಹಾಗೂ 39 ನೇ ವರ್ಧಂತ್ಯುತ್ಸವದ ಅಂಗವಾಗಿ ಫೆ.2 ರಂದು ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಈ ಸಂದರ್ಭದಲ್ಲಿ ಪೂಜ್ಯ 105 ಶ್ರೀ ನಿರ್ವಾಣ ಸಾಗರ ಕ್ಷುಲ್ಲಕ ಮಹಾರಾಜರು, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.


ಫೆ.3 ರಂದು ಬೆಳಿಗ್ಗೆ ಗಂಟೆ 8.30ರಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.  ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕರು ಮಂಗಲ ಪ್ರವಚನ ನೀಡಲಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.