ಉಜಿರೆ: ದ.ಕ ಜಿಲ್ಲಾ ಪಂಚಾಯತ್, ಪಶುಸಂಗೋಪಣಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಉಜಿರೆ ಇದರ ಆಶ್ರಯದಲ್ಲಿ ಉಜಿರೆ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಕಡೆ ಸಾಕು ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ಫೆ.3 ರಂದು ನಡೆಯಿತು.
ಉಜಿರೆ ಗ್ರಾ.ಪಂ ಆಡಳಿತಾಧಿಕಾರಿ ಡಾ. ಯತೀಶ್ ಕುಮಾರ್ ಎಂ.ಎಸ್ ಕಾರ್ಯಕ್ರಮ ಉದ್ಘಾಟಿಸಿದರು. ಉಜಿರೆ ಪಶು ಚಿಕಿತ್ಸಾಲಯದ ಪಶುವೈದ್ಯಾಧಿಕಾರಿ ಡಾ| ಕಾರ್ತಿಕ್ ಪಿ, ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಪಿ.ಹೆಚ್ ಸಂಯೋಜಿಸಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯದರ್ಶಿ ಜಯಂತಿ ಯು.ಬಿ, ಉಜಿರೆ ಗ್ರಾ.ಪಂ ನೂತನ ಸದಸ್ಯರುಗಳು, ಪಶು ಸಂಗೋಪಣಾ ಇಲಾಖೆಯ ಸಿಬ್ಬಂದಿ ವರ್ಗದವರು, ಗ್ರಾ.ಪಂ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗ್ರಾ.ಪಂ ಲೆಕ್ಕ ಸಹಾಯಕ ಮಂಜು ಕೆ.ಜಿ ವಂದಿಸಿದರು. ಉಜಿರೆ ಗ್ರಾ.ಪಂ ವ್ಯಾಪ್ತಿಯಲ್ಲಿ ನಾಲ್ಕು ತಂಡಗಳನ್ನು ರಚಿಸಿ ಸುಮಾರು ೫೦೦ ನಾಯಿಗಳಿಗೆ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ನೀಡಲಾಯಿತು.