ಮುಂಡಾಜೆ ಸಹಕಾರಿ ಸಂಘ: ಆಮಂತ್ರಣ ಪತ್ರಿಕೆ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮುಂಡಾಜೆ: ಶತಮಾನೋತ್ಸವ ಸಂಭ್ರಮದಲ್ಲಿರುವ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸೋಮಂತಡ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶತಮಾನೋತ್ಸವ ಸಂಕೀರ್ಣ ಕಟ್ಟಡವು ಫೆ. 21ರಂದು ಲೋಕಾರ್ಪಣೆಗೊಳ್ಳಲಿದೆ.
ಈ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ.3 ರಂದು ಮುಂಡಾಜೆಯ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಠಾರದಲ್ಲಿ ಜರಗಿತು. ಹಿರಿಯ ಸಹಕಾರಿ ಎನ್. ಎಸ್.ಗೋಖಲೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಸಂಘದ ಅಧ್ಯಕ್ಷ ನೂಜಿ ಜನಾರ್ದನ ಗೌಡ, ಉಪಾಧ್ಯಕ್ಷ ಪ್ರಕಾಶ ನಾರಾಯಣ ರಾವ್, ನಿರ್ದೇಶಕರಾದ ರಾಘವ ಕಲ್ಮಂಜ ಜ್ಯೋತಿ ಫಡ್, ಕೆ ಸಂಜೀವ ಗೌಡ ಮಾಕಳ, ದೇವಸ್ಥಾನದ ಆಡಳಿತ ಮೊಕ್ತೇಸರ ಕಜೆ ವೆಂಕಟೇಶ್ವರ ಭಟ್ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಸ್ವಾಗತಿಸಿದರು. ಕಕ್ಕಿಂಜೆ ಶಾಖಾ ವ್ಯವಸ್ಥಾಪಕ ಮಧುಕರ ರಾವ್ ಕಾರ್ಯಕ್ರಮ ನಿರೂಪಿಸಿದರು. ಸೋಮಂತಡ್ಕ ಶಾಖಾ ವ್ಯವಸ್ಥಾಪಕ ಚಂದ್ರಕಾಂತ ಪ್ರಭು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.