ಮದ್ದಡ್ಕ ಮಠದಗುಡ್ಡೆ ಪರಿಸರದಲ್ಲಿ ತ್ಯಾಜ್ಯ ರಾಶಿ

ಗುರುವಾಯನಕೆರೆ: ಇಲ್ಲಿಯ ಕುವೆಟ್ಟು ಗ್ರಾಮದ ಮದ್ದಡ್ಕ ಮಠದ ಗುಡ್ಡೆ ಎಂಬಲ್ಲಿ ತ್ಯಾಜ್ಯದ ರಾಶಿಗಳು ಕಂಡು ಬಂದಿದ್ದು, ದುರ್ವಾಸನೆ ಬೀರುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.
ರಸ್ತೆ ಬದಿಯ ಮರದ ಬುಡ ಹಾಗೂ ಇತರ ಕಡೆಗಳಲ್ಲಿ ತ್ಯಾಜ್ಯಗಳ ರಾಶಿಯೇ ಬಿದ್ದಿದೆ. ಅಲ್ಲಲ್ಲಿ ಪ್ಲಾಸ್ಟಿಕ್‌ನ ರಾಶಿ ಹಾಗೂ ಕಸದ ರಾಶಿ ಕಂಡು ಬಂದಿದ್ದು, ಪರಿಸರ ದುರ್ವಾಸನೆ ಬೀರುತ್ತಿದೆ. ರಾತ್ರಿ ಸಮಯ ಯಾರೋ ವಾಹನಗಳಲ್ಲಿ ತ್ಯಾಜ್ಯಗಳನ್ನು ತಂದು ಇಲ್ಲಿ ಹಾಕುತ್ತಿದ್ದಾರೆ. ಇದರಿಂದಾಗಿ ಪರಿಸರ ಮಾಲಿನ್ಯ ಉಂಟಾಗಿದ್ದು, ಸಂಬಂಧ ಪಟ್ಟವರು ಇದರ ಬಗ್ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.