
ಧರ್ಮಸ್ಥಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾಗಿರುವ ಸ್ವಸ್ತಿಕ್ ಕನ್ಯಾಡಿ ರವರಿಗೆ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್ಚಿ ಕ್ಕಬಳ್ಳಾಪುರ ಮತ್ತು ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು ಯಲಹಂಕ ಬೆಂಗಳೂರು ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ‘ರಾಜ್ಯ ಯುವರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇವರಿಗೆ ಈ ಹಿಂದೆ ಪ್ರಜಾವಾಣಿ ಯುವಸಾಧಕ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿ ಹಾಗೂ ಇನ್ನಿತರ ಪುರಸ್ಕಾರಗಳು ಲಭಿಸಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾಷಣ, ಪ್ರಬಂಧ, ಲೇಖನ, ಸಾಹಿತ್ಯಗಳಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿರುವ ಇವರು ಅನೇಕ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.
ಪ್ರಸ್ತುತ ಎಸ್.ಡಿ.ಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ದ್ವಿತೀಯ ವರ್ಷದಲ್ಲಿ ಓದುತ್ತಿರುವ ಇವರು ಕಲ್ಮಂಜ ಗ್ರಾಮದ ರಮೇಶ್ ಗೌಡ ಮತ್ತು ಸುಧಾ ದಂಪತಿ ಪುತ್ರ.