ಉಜಿರೆ: ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ತಹಶೀಲ್ದಾರರ ನಿಯೋಗ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡ ಸೇವಾಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು.
ಬೆಂಗಳೂರು ಗ್ರಾಮಾಂತರದ ಕೃಷಿಕರಿಗೆ ನೀರಾವರಿಗೆ ಅನುಕೂಲವಾಗುವಂತೆ ನಮ್ಮೂರು, ನಮ್ಮ ಕೆರೆ ಯೋಜನೆಯಲ್ಲಿ ಕೆರೆ ಅಭಿವೃದ್ಧಿ ಕಾರ್ಯಕ್ರಮ, ಎಸ್.ಡಿ.ಎಂ. ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನೆಲಮಂಗಲದಲ್ಲಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮೂಲಕ ಜನರ ಆರೋಗ್ಯ ರಕ್ಷಣೆಗೆ ಕಾಯಕಲ್ಪ ಮೊದಲಾದ ಸೇವಾಕಾರ್ಯಗಳ ಬಗ್ಗೆ ಹೆಗ್ಗಡೆಯವರನ್ನು ಅಭಿನಂದಿಸಿದರು.
ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಜಯಕುಮಾರ್, ಬಿ.ಡಿ.ಎ. ತಹಶೀಲ್ದಾರ್ ಬಾಲಕೃಷ್ಣ, ದೇವನಹಳ್ಳಿ ತಹಶೀಲ್ದಾರ್ ಗಂಗಾಧರ್, ಬೆಂಗಳೂರು ನಗರ ತಹಶೀಲ್ದಾರ್ ಗಿರೀಶ್ ಮೊದಲಾದವರು ನಿಯೋಗದಲ್ಲಿದ್ದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ವಿ. ರಾಮಸ್ವಾಮಿ, ಮತ್ತು ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಸ್ ಉಪಸ್ಥಿತರಿದ್ದರು