ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಬಸ್ಸು ನಿಲ್ದಾಣ ನಿರ್ಮಾಣ ಮಾಡುವ ಬಗ್ಗೆ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ಫೆ.4 ರಂದು ಬೆಂಗಳೂರಿನಲ್ಲಿ ಸಚಿವರ ಕಛೇರಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಪೌರಾಡಳಿತ ಇಲಾಖೆ, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಉನ್ನತ ಅಧಿಕಾರಿಗಳು, ಸಾರಿಗೆ ಇಲಾಖೆಯ ಪುತ್ತೂರು ವಿಭಾಗದ ಕಾಮಗಾರಿ ಪರಿವೀಕ್ಷಕ ಮುಖ್ಯ ಅಭಿಯಂತರರು ಸಭೆಯಲ್ಲಿ ಭಾಗವಹಿಸಿದ್ದರು.