ನಾಳೆ ಧರ್ಮಸ್ಥಳದಲ್ಲಿ ಚತುಷ್ಪದ ರಸ್ತೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಉಪಮುಖ್ಯಮಂತ್ರಿಗಳು
ಉಜಿರೆ: ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ರವರು ಇಂದು( ಫೆ.6) ಸಂಜೆ 7 ಗಂಟೆಗೆ ವಿಮಾನ ಮೂಲಕ ಬೆಂಗಳೂರಿನಿಂದ ಬಜ್ಪೆಗೆ ಬಂದು ರಾತ್ರಿ8.30ಕ್ಕೆ ಧರ್ಮಸ್ಥಳಕ್ಕೆ ಬಂದು ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ತಂಗಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಲಿರುವರು.
ನಾಳೆ(ಫೆ.7)ಬೆಳಿಗ್ಗೆ ಗಂಟೆ10.30ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ಚತುಷ್ಪದ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು ಬಳಿಕ ಗಂಟೆ 11.30ಕ್ಕೆ ಬೆಳ್ತಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಮಾಡುವರು.
ಸಂಜೆ 5.30ಕ್ಕೆ ಧರ್ಮಸ್ಥಳದಿಂದ ಹೊರಟು ಬಜ್ಪೆಯಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.