ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಿ ರೂ.25 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೇರವೇರಿಸಲಾಗಿದ್ದು, ಹೆಚ್ಚುವರಿ ರೂ.25 ಕೋಟಿ ಅನುದಾನ ನೀಡುವುದಾಗಿ ಉಪ ಮುಖ್ಯ ಮಂತ್ರಿ ಹಾಗೂ ಲೋಕೋಪಯೋಗಿ ಇಲಾಖಾ ಸಚಿವ ಗೋವಿಂದ ಎಂ. ಕಾರಜೋಳ ಹೇಳಿದರು.
ಅವರು ಫೆ.7ರಂದು ಬೆಳ್ತಂಗಡಿಯಲ್ಲಿ ರೂ.4.95 ಕೋಟಿ ವೆಚ್ಚದಲ್ಲಿ ನೂತನ ಸರಕಾರಿ ಪರಿವೀಕ್ಷಣಾ ಮಂದಿರಕ್ಕೆ ಶಿಲಾನ್ಯಾಸ ನೇರವೇರಿಸಿ, ನಂತರ ಬೆಳ್ತಂಗಡಿ ಎಸ್.ಡಿ.ಎಂ ಸಭಾ0ಗಣದಲ್ಲಿ ನಡೆದ ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ
ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಇಂದು ಅಭಿವೃದ್ಧಿಯ ಗಾಳಿ ಬೀಸುತ್ತಿದ್ದು, ಕೇಂದ್ರ ಸರ್ಕಾರ ರೈತರ ಪರವಾಗಿ ಆನೇಕ ಯೋಜನೆಗಳನ್ನು ತಂದಿದ್ದು, ಈಗ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ, ಇದು ರಾಜಕೀಯ ಪ್ರೇರಿತ ಪ್ರತಿಭಟನೆ, ಇದರ ಹಿಂದೆ ಕಾಂಗ್ರೆಸ್ ಪಕ್ಷವಿದೆ. ಕಾಂಗ್ರೆಸ್ ರಾಷ್ಟ್ರ ವಿರೋಧಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಶಾಸಕ ಹರೀಶ್ ಪೂಂಜ ಪ್ರಾಸ್ತಾವಿಕ ಮಾತನಾಡಿ, ಅತೀ ಹೆಚ್ಚು ಗುಡ್ಡಗಾಡು ಪ್ರದೇಶವನ್ನು ಹೊಂದಿದ್ದು, ಇಲ್ಲಿ ಯ ರಸ್ತೆ ಅಭಿವೃದ್ಧಿಗೆ ರೂ.100 ಕೋಟಿ ಅನುದಾನ ದ ಬೇಕಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾಯ೯ದಶಿ೯ ಶ್ರೀನಿವಾಸ ರಾವ್, ಕೊರಗಪ್ಪ ನಾಯ್ಕ, ಧನಲಕ್ಷಿ ಜನಾದ೯ನ್, ಚೆನ್ನಕೇಶವ ಉಪಸ್ಥಿತಿ ಇದ್ದರು.