ಜನೌಷಧ ಕೇಂದ್ರಗಳಿಂದ ಗುಣಮಟ್ಟದ ಔಷಧಿ ಕಡಿಮೆ ಬೆಲೆಯಲ್ಲಿ: ಶಾಸಕ ಹರೀಶ್ ಪೂಂಜ
ವೇಣೂರು: ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಔಷಧಿಗಳನ್ನು ಪೂರೈಸುವುದಷ್ಟೇ ಅಲ್ಲದೆ ಸ್ವಯಂ ಉದ್ಯೋಗ ಒದಗಿಸುತ್ತಿದೆ ಮತ್ತು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.
ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರದಲ್ಲಿ ವೇಣೂರು ಮಹಾವೀರ ನಗರದಲ್ಲಿರುವ ಅರಿಹಂತ ಕಾಂಪ್ಲೆಕ್ಸ್ನಲ್ಲಿ ಫೆ. 8ರಂದು ನೂತನವಾಗಿ ಪ್ರಾರಂಭಿಸಲಾದ ಭಾರತೀಯ ಜನೌಷಧ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಗಳು ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ ಸರ್ಕಾರ ಕೈಗೊಂಡ ಯೋಜನೆ ಇದಾಗಿದೆ. ಜನೌಷಧಿ ಕೇಂದ್ರಗಳಲ್ಲಿ ಮಾರುಕಟ್ಟೆ ದರಕ್ಕಿಂತ ಅಗ್ಗದ ಬೆಲೆಯಲ್ಲಿ ಔಷಧಿಗಳು ದೊರಕಲಿದೆ. ಈ ಕ್ರಮಗಳಿಂದಾಗಿ ಬಡವರಿಗಷ್ಟೇ ಅಲ್ಲ, ಮಧ್ಯಮ ವರ್ಗದ ಜನರಿಗೂ ಹೆಚ್ಚಿನ ಅನುಕೂಲವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ವೇಣೂರಿನ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ವೇಣೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಅರುಣ್ ಹೆಗ್ಡೆ, ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ.ಇ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ, ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ವೇಣೂರು ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಕ್ರಾಸ್ತ, ಪೆರಿಂಜೆ ಯು.ಕೆ. ಕನ್ಸ್ಟ್ರಕ್ಷನ್ನ ಯು.ಕೆ. ಮಹಮ್ಮದ್, ಕರಿಮಣೇಲು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪ್ರವೀಣ್ ಹೆಗ್ಡೆ, ಬೆಂಗಳೂರು ಸಂಜೀವಿನಿ ಟ್ರಸ್ಟ್ ಅಧ್ಯಕ್ಷ ಯೋಗೀಶ್ ಹೆಗ್ಡೆ, ಅಶ್ವಿನಿ ವೈ. ಹೆಗ್ಡೆ, ವೇಣೂರು ಗ್ರಾ.ಪಂ. ಸದಸ್ಯರು, ವೇಣೂರು ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರು, ವೇಣೂರಿನ ಉದ್ಯಮಿಗಳು ಹಾಗೂ ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು.
ಸಂಸ್ಥೆಯ ಮಾಲಕರಾದ ಶ್ರೀಮತಿ ಮಮತಾ ಪ್ರಕಾಶ್ ಹೆಗ್ಡೆ ಹಾಗೂ ರಮೇಶ್ ಹೆಗ್ಡೆ ಅವರು ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು. ಸಭಾ ಕಾರ್ಯಕ್ರಮವನ್ನು ಗಿರೀಶ್ ಕುಲಾಲ್ ನಿರ್ವಹಿಸಿದರು.