ಕೂಕ್ರಬೆಟ್ಟು ಶಾಲೆಯಲ್ಲಿ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಸಮಾಲೋಚನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮರೋಡಿ: ಇಲ್ಲಿಯ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಕುರಿತು ಸಮಾಲೋಚನಾ ಸಭೆಯು ಫೆ.8 ರಂದು ಜರುಗಿತು.  ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನದ ರಾಜ್ಯಾಧ್ಯಕ್ಷ ಪ್ರಕಾಶ್‌ ಅಂಚನ್‌  ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,‘ಕೋವಿಡ್‌ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸರ್ಕಾರಿ ಶಾಲೆಗಳನ್ನು ಹಂತಹಂತವಾಗಿ ಒಂದನೇ ತರಗತಿಯಿಂದಲೇ ತೆರೆಯಲು ಕ್ರಮ ಕೈಗೊಳ್ಳಬೇಕು’.‘ಎರಡು ವರ್ಷಗಳ ಹಿಂದೆ 16 ಮಕ್ಕಳಿದ್ದ ಈ ಶಾಲೆಯಲ್ಲಿ ಇಂದು 120ಕ್ಕೂ ಅಧಿಕ ಮಕ್ಕಳು ದಾಖಲಾತಿ ಪಡೆದಿರುವುದು ನಿಜಕ್ಕೂ ದೊಡ್ಡ ಸಾಧನೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿದರೆ ಮಕ್ಕಳ ಕೊರತೆಯನ್ನು ನೀಗಿಸಲು ಸಾಧ್ಯ ಎಂಬುದಕ್ಕೆ ಈ ಶಾಲೆ ಉತ್ತಮ ಉದಾಹರಣೆ. ಈ ಶಾಲೆಗೆ ಸುಸಜ್ಜಿತ ಕಟ್ಟಡ ಅಗತ್ಯವಿದ್ದು, ಇದಕ್ಕೆ ದಡ್ಡಲಕಾಡು ಶ್ರೀ ದುರ್ಗಾ ಚಾರಿಟಬಲ್‌ ಟ್ರಸ್ಟ್‌ ಸಂಪೂರ್ಣ ಸಹಕಾರ ನೀಡಲಿದೆ’ ಎಂದರು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸ್ಥಳೀಯ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್‌ ಅಧ್ಯಕ್ಷತೆ ವಹಿಸಿ, ‘ಕೂಕ್ರಬೆಟ್ಟು ಶಾಲೆಯನ್ನು ಮಾದರಿ ಶಾಲೆಯಾಗಿ ಬೆಳೆಸುವ ಗುರಿಯನ್ನು ಹೊಂದಲಾಗಿದೆ. ಈ ಶಾಲೆಗೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಸುಮಾರು ರೂ.1 ಕೋಟಿ ವೆಚ್ಚದಲ್ಲಿ 12 ಕೊಠಡಿಯ ಕಟ್ಟಡ ನಿರ್ಮಿಸುವ ಯೋಜನೆಯಿದೆ. ಈಗಾಗಲೇ ಶಾಸಕ ಹರೀಶ್‌ ಪೂಂಜ ಅವರು ರೂ.42 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದಾರೆ. ಕಟ್ಟಡಕ್ಕೆ ಈಗಾಗಲೇ ನೆಲ ಸಮತಟ್ಟು ಮಾಡಲಾಗಿದ್ದು, ಮುಂದಿನ ತಿಂಗಳು ಶಿಲಾನ್ಯಾಸ ನೆರವೇರಿಸಲಾಗುವುದು. ಎಂಆರ್‌ಪಿಎಲ್‌ನ ಸಿಎಸ್‌ಆರ್‌ ನಿಧಿಯಿಂದ ಶಾಲಾ ಶೌಚಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಗ್ರಾಮೀಣ ಪ್ರದೇಶದಲ್ಲಿರುವ ಈ ಶಾಲೆಯನ್ನು ಹಂತಹಂತವಾಗಿ ಮೇಲ್ದರ್ಜೆಗೆ ಏರಿಸಲು ಪ್ರಯತ್ನಿಸಲಾಗುವುದು’ ಎಂದರು.

ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಘಟಕದ ಕಾರ್ಯದರ್ಶಿ ಪುರುಷೋತ್ತಮ ಅಂಚನ್‌, ಗ್ರಾ.ಪಂ.ಸದಸ್ಯರಾದ ರತ್ನಾಕರ ಬುಣ್ಣಾನ್‌, ಪದ್ಮಶ್ರೀ ಜೈನ್‌, ಅಶೋಕ್‌ ಪೂಜಾರಿ, ಶುಭರಾಜ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸ್ಥಳೀಯ ಸಮಿತಿ ಕಾರ್ಯದರ್ಶಿ ನಾರಾಯಣ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಶ್‌ ಮರೋಡಿ ,ಎಸ್‌ಡಿಎಂಸಿ ಸದಸ್ಯರು, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸ್ಥಳೀಯ ಸಮಿತಿ ಸದಸ್ಯರು, ಪೋಷಕರು, ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಭಾರ ಮುಖ್ಯಶಿಕ್ಷಕಿ ಸುಫಲಾ ಸ್ವಾಗತಿಸಿ, ಸಹಶಿಕ್ಷಕಿ ಹರ್ಷಲಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.