ಮಿತ್ತಬಾಗಿಲು ಗ್ರಾ.ಪಂ ಅಧ್ಯಕ್ಷರಾಗಿ ಲತಾ, ಉಪಾಧ್ಯಕ್ಷರಾಗಿ ವಿನಯಚಂದ್ರ ಗೌಡ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಶ್ರೀಮತಿ ಲತಾ ಹಾಗೂ ಉಪಾಧ್ಯಕ್ಷರಾಗಿ ವಿನಯಚಂದ್ರ ಗೌಡ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಮಿತ್ತಬಾಗಿಲು ಗ್ರಾಮ ಪಂಚಾಯತದಲ್ಲಿ ಫೆ.9 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಹಾಗೂ ಗ್ರಾ.ಪಂ ಆಡಳಿತಾಧಿಕಾರಿ ಶಕುಂತಳಾ ಶೆಣೈ ರವರು ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್.ಬಿ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಮಿತ್ತಬಾಗಿಲು-೨ ವಾರ್ಡ್‌ನಲ್ಲಿ ಹಿಂದುಳಿದ ವರ್ಗ ಎ ಸ್ಥಾನದಿಂದ ಶ್ರೀಮತಿ ಲತಾ ಹಾಗೂ ಮಿತ್ತಬಾಗಿಲು ವಾರ್ಡ್-೩ರಲ್ಲಿ ಸಾಮಾನ್ಯ ಕ್ಷೇತ್ರದಿಂದ ವಿನಯಚಂದ್ರ ಗೌಡ ರವರು ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿ ಜಯಶಾಲಿಗಳಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.