ಕಲ್ಲೇರಿ : ಇಲ್ಲಿಯ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ನಿರ್ದೇಶಕಿ ಹಾಗೂ ಇಳಂತಿಲ ಗ್ರಾ.ಪಂ ಮಾಜಿ ಸದಸ್ಯೆ ರೋಸ್ಲಿನ್ ಪಿಂಟೊರವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಮತ್ತು ನಿರ್ದೇಶಕರ ವತಿಯಿಂದ ಧನಸಹಾಯವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ದುಗ್ಗಪ್ಪ ಗೌಡ ಪಿ, ನಿರ್ದೇಶಕರುಗಳಾದ ವಿನ್ಸೆಂಟ್ ಬ್ರಾಗ್ಸ್, ತಿಮ್ಮಯ್ಯ ಗೌಡ, ಜೆರೋಮ್ ಬ್ರಾಗ್ಸ್, ಪುರಂದರ ಗೌಡ ಎನ್.,ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.