ಫೆ.14 ರಂದು ಅಳದಂಗಡಿಯಲ್ಲಿ ಶ್ರೀ ದೀಪಾ ಸಭಾಭವನದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಅಳದಂಗಡಿ: ಇಲ್ಲಿನ ಕೆದ್ದು ಮಿತ್ತರೋಡಿ ಸಮೀಪ ನೂತನವಾಗಿ ನಿರ್ಮಿಸಿದ ಶ್ರೀ ದೀಪಾ ಸಭಾಭವನದ ಉದ್ಘಾಟನಾ ಸಮಾರಂಭವು ಫೆ.14 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಭಾಭವನದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಗೂ ಭೋಜನಾಲಯದ ಉದ್ಘಾಟನೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರಾದ ಶಿವಪ್ರಸಾದ್ ಅಜಿಲ ನೇರವೇರಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಸೋಮನಾಥ ಮಯ್ಯ ನಡೆಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಂಗಾಧರ ಮಿತ್ತಮಾರು, ಶಿರ್ಲಾಲು ಸಿ.ಎ ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ನಿತ್ಯಾನಂದ ಶೆಟ್ಟಿ ನೊಚ್ಚ, ಅಳದಂಗಡಿ ಗ್ರಾ.ಪಂ ಸದಸ್ಯರಾದ ಹರೀಶ್ ಆಚಾರ್ಯ, ಕೃಷ್ಣಪ್ಪ ಬಿಕ್ಕಿರ, ಗೀತಾ ವಿಠಲ ಮಡಿವಾಳ, ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಜೆರ್ಮಿ ಡೇಸಾ, ಧ್ವನಿವರ್ಧಕ ಹಾಗೂ ದೀಪಾಲಂಕಾರ ಸಂಘದ ಅಧ್ಯಕ್ಷ ಸುನೀಲ್ ಲೋಬೊ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕ ಪ್ರಭಾಕರ ಶೆಟ್ಟಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.