ರೋಟರಿ ಕ್ಲಬ್ ಸೇವಾ ಟ್ರಸ್ಟ್ ಸಭಾಭವನ ಉದ್ಘಾಟನೆ: ಡಾ. ಹೆಗ್ಗಡೆಯವರಿಗೆ ಆಮಂತ್ರಣ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಬೆಳ್ತಂಗಡಿ ರೋಟರಿ ಕ್ಲಬ್ ಸುವರ್ಣ ಸಂಭ್ರಮದ ಸವಿ ನೆನಪಿಗಾಗಿ ರೋಟರಿ ಸೇವಾ ಟ್ರಸ್ಟ್‌ನ ನೇತೃತ್ವದಲ್ಲಿ ರೂ. 1.65 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಭವ್ಯ ರೋಟರಿ ಸಭಾಭವನದ ಉದ್ಘಾಟನಾ ಸಮಾರಂಭವು ಫೆ.28ರಂದು ನಡೆಯಲಿದ್ದು, ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೆರವೇರಿಸಲಿದ್ದಾರೆ.
ಆ ಪ್ರಯುಕ್ತ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಜಿಲ್ಲೆಯ ಅಸಿಸ್ಟೆಂಟ್ ಗವರ್ನರ್ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ರೋಟರಿ ಕ್ಲಬ್‌ನ ಅಧ್ಯಕ್ಷ ಧನಂಜಯ ರಾವ್, ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಧರ ಕೆ.ವಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ. ಬಿ.ಯಶೋವರ್ಮ, ರೋಟರಿ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ವಿ.ಭಟ್, ಶ್ರೀಕಾಂತ ಕಾಮತ್, ಡಾ. ಶಶಿಧರ ಡೋಂಗ್ರೆ, ಸಂದೇಶ್ ಕುಮಾರ್ ರಾವ್, ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.