ಮಲವಂತಿಗೆ ಗ್ರಾ.ಪಂ ಅಧ್ಯಕ್ಷರಾಗಿ ಅನಿತಾ ಕೆ, ಉಪಾಧ್ಯಕ್ಷರಾಗಿ ಡಿ. ದಿನೇಶ್ ಗೌಡ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಲವಂತಿಗೆ: ಇಲ್ಲಿಯ ಮಲವಂತಿಗೆ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಅನಿತಾ ಕೆ ಹಾಗೂ ಉಪಾಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಡಿ. ದಿನೇಶ್ ಗೌಡ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲವಂತಿಗೆ ಗ್ರಾ.ಪಂನಲ್ಲಿ ಫೆ.10 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಹಾಗೂ ತಾ.ಪಂ ಸಹಾಯಕ ಲೆಕ್ಕಾಧಿಕಾರಿ ಶಕುಂತಳಾ ಶೆಣೈ ರವರು ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಲವಂತಿಗೆ ಗ್ರಾಮ ಪಂಚಾಯತ್‌ನ 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 6 ಸ್ಥಾನಗಳನ್ನು ಬಿಜೆಪಿ ಬೆಂಬಲಿತರ ಪಡೆದುಕೊಂಡು ಪಂಚಾಯತದ ಅಧಿಕಾರವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಎರಡು ಸ್ಥಾನಗಳು ಕಾಂಗ್ರೆಸ್ ಪಾಲಾಗಿತ್ತು.
ಮಲವಂತಿಗೆ ವಾರ್ಡ್-1 ರಲ್ಲಿ ಪ.ಪಂಗಡ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶ್ರೀಮತಿ ಅನಿತಾ ಕೆ ರವರು ಅಧ್ಯಕ್ಷ ಗಾದಿಗೆ ನಿಗದಿಯಾದ ಮೀಸಲಾತಿಗೆ ಸೇರಿದ್ದರಿಂದ ಅವರು ಇದರ ಸದುಪಯೋಗವನ್ನು ಪಡೆದುಕೊಂಡು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲವಂತಿಗೆ ವಾರ್ಡ್-2ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಾಜಿ ಅಧ್ಯಕ್ಷ ಡಿ ದಿನೇಶ್ ಗೌಡ ರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.