ಇಂದಬೆಟ್ಟು: ತೀರಾ ಬಡತನದಲ್ಲಿರುವ ಇಂದಬೆಟ್ಟು ಗ್ರಾಮದ ಕಜೆ ನಿವಾಸಿ ರಮೇಶ್ ಗೌಡ ರವರು ಅನಾರೋಗ್ಯದಿಂದ ಬಳಲುತ್ತಿದ್ದು, ಇವರ ಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಡಿ ರೂ.10 ಸಾವಿರ ಸಹಾಯಧನದ ಚೆಕ್ಕನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷೆ ಶೋಭಾ ನಾರಾಯಣ ಗೌಡ ದೇವಸ್ಯ ರವರು ಫಲಾನುಭವಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ತಾಲೂಕು ಸಮಿತಿಯ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಆಪರೇಟಿವ್(ಲಿ.) ನಿರ್ದೇಶಕರಾದ ಸುರೇಶ್ ಕೌಡಂಗೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹಾಬಲ ಗೌಡ ಮತ್ತು ಶ್ರೀಮತಿ ಮೀನಾಕ್ಷಿ ಮತ್ತು ಸ್ಪಂದನಾ ಸೇವಾ ಸಂಘದ ಸದಸ್ಯರು ಉಪಸ್ಥಿತರಿದ್ದರು.