ಪಡಂಗಡಿ ಗ್ರಾ.ಪಂ ಅಧ್ಯಕ್ಷರಾಗಿ ಮೀನಾಕ್ಷಿ ಉಪಾಧ್ಯಕ್ಷರಾಗಿ ಕವಿತಾ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಮಾಜಿ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಕವಿತಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಡಂಗಡಿ ಗ್ರಾ.ಪಂನಲ್ಲಿ ಫೆ.10 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ರಾಜ್ಯವಲಯ ಮದ್ದಡ್ಕದ ಸಹಾಯಕ ತೋಟಗಾರಿಕಾ ನಿರ್ದೇಶಕಿ ಲಿಖಿತ್ ರಾಜ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶಫನಾ, ಕಾರ್ಯದರ್ಶಿ ತಾರಾನಾಥ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪಡಂಗಡಿ ಗ್ರಾಮ ಪಂಚಾಯತದ ಒಟ್ಟು 17 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 17 ಸ್ಥಾನಗಳನ್ನೂ ಬಿಜೆಪಿ ಬೆಂಬಲಿತರ ಅಭ್ಯರ್ಥಿಗಳು ಪಡೆದುಕೊಂಡು ಪಂಚಾಯತದ ಅಧಿಕಾರದ ಗದ್ದುಗೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಪಡಂಗಡಿ ವಾರ್ಡ್-3 ರಲ್ಲಿ ಸಾಮಾನ್ಯ ಮಹಿಳೆ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಮಾಜಿ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ರವರು ಅಧ್ಯಕ್ಷ ಗಾದಿಗೆ ನಿಗದಿಯಾದ ಮೀಸಲಾತಿಗೆ ಸೇರಿದ್ದರಿಂದ ಅವರು ಇದರ ಸದುಪಯೋಗವನ್ನು ಪಡೆದುಕೊಂಡು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗರ್ಡಾಡಿ ವಾರ್ಡ್-3ರಲ್ಲಿ ಸಾಮಾನ್ಯ ಮಹಿಳೆ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಕವಿತಾ ರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.