ಶಿಶಿಲ ಗ್ರಾ.ಪಂ ಅಧ್ಯಕ್ಷರಾಗಿ ಸಂದೀಪ್, ಉಪಾಧ್ಯಕ್ಷರಾಗಿ ವಿಮಲ ಡಿ ಅವಿರೋಧ ಆಯ್ಕೆ

ಶಿಶಿಲ: ಶಿಶಿಲ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಸಂದೀಪ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ವಿಮಲ.ಡಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿಶಿಲ ಗ್ರಾ.ಪಂನಲ್ಲಿ ಫೆ.10 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರಿಯಾ ಆಗ್ನೇಸ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಗದೀಶ್, ಕಾರ್ಯದರ್ಶಿ ಅಂಬರೀಷ್, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಿಶಿಲ ಗ್ರಾಮ ಪಂಚಾಯತ್‌ನ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 6 ಸ್ಥಾನಗಳನ್ನೂ ಪಡೆದುಕೊಂಡು ಪಂಚಾಯತದ ಅಧಿಕಾರವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.
ಶಿಶಿಲ ವಾರ್ಡ್-2 ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಸಂದೀಪ್ ಎ.ಎಸ್ ರವರು ಅಧ್ಯಕ್ಷ ಗಾದಿಗೆ ನಿಗದಿಯಾದ ಮೀಸಲಾತಿಗೆ ಸೇರಿದ್ದರಿಂದ ಅವರು ಇದರ ಸದುಪಯೋಗವನ್ನು ಪಡೆದುಕೊಂಡು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಿಶಿಲ ವಾರ್ಡ್-1ರಲ್ಲಿ ಹಿಂದುಳಿದ ವರ್ಗ ಎ ಮಹಿಳಾ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ವಿಮಲರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.