ಶಿಬಾಜೆ ಗ್ರಾ.ಪಂ ಅಧ್ಯಕ್ಷರಾಗಿ ರತೀಶ್ ಬಿ, ಉಪಾಧ್ಯಕ್ಷರಾಗಿ ವಿನಯಚಂದ್ರ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ರತೀಶ್ ಬಿ ಹಾಗೂ ಉಪಾಧ್ಯಕ್ಷರಾಗಿ ವಿನಯಚಂದ್ರ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಿಬಾಜೆ ಗ್ರಾಮ ಪಂಚಾಯತದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಗಾದಿಗೆ ಸಾಮಾನ್ಯ ಸ್ಥಾನ ಮೀಸಲಾತಿ ನಿಗದಿಯಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಶಿಬಾಜೆ ವಾರ್ಡ್-2 ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ರತೀಶ್ ಬಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶಿಬಾಜೆ ವಾರ್ಡ್-1ರಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದ ವಿನಯಚಂದ್ರ ರವರು ನಾಮಪತ್ರ ಸಲ್ಲಿಸಿದ್ದರು.
ಫೆ.10 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಜೈನ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಯರಾಜ್, ಕಾರ್ಯದರ್ಶಿ ಹೊನ್ನಪ್ಪ ಗೌಡ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಿಬಾಜೆ ಗ್ರಾಮ ಪಂಚಾಯತ್‌ನ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 6 ಸ್ಥಾನಗಳನ್ನೂ ಪಡೆದುಕೊಂಡು ಪಂಚಾಯತದ ಅಧಿಕಾರವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.