ಹೊಸಂಗಡಿ ಗ್ರಾ.ಪಂ ಅಧ್ಯಕ್ಷರಾಗಿ ಕರುಣಾಕರ ಉಪಾಧ್ಯಕ್ಷರಾಗಿ ನಾಗರತ್ನ ಅವಿರೋಧ ಆಯ್ಕೆ

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತದ ನೂತನ ಅಧ್ಯಕ್ಷರಾಗಿ ಕರುಣಾಕರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ನಾಗರತ್ನಾ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊಸಂಗಡಿ ಗ್ರಾ.ಪಂನಲ್ಲಿ ಫೆ.10 ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಾದ ಶಿವಪ್ರಸಾದ್ ಅಜಿಲ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೊಸಂಗಡಿ ಗ್ರಾಮ ಪಂಚಾಯತದ ಒಟ್ಟು 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 9 ಸ್ಥಾನಗಳನ್ನು ಪಡೆದ ಬಿಜೆಪಿ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. ಇಲ್ಲಿ ಗ್ರಾಮ ವಿಕಾಸ ವೇದಿಕೆಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಕೇವಲ 3 ಸ್ಥಾನಗಳನ್ನಷ್ಟೇ ಪಡೆದುಕೊಂಡಿದ್ದರು.
ಬಡಕೋಡಿ ವಾರ್ಡ್-1 ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಕರುಣಾಕರ ರವರು ಅಧ್ಯಕ್ಷ ಗಾದಿಗೆ ನಿಗದಿಯಾದ ಮೀಸಲಾತಿಗೆ ಸೇರಿದ್ದರಿಂದ ಅವರು ಇದರ ಸದುಪಯೋಗವನ್ನು ಪಡೆದುಕೊಂಡು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹೊಸಂಗಡಿ ವಾರ್ಡ್-೨ರಲ್ಲಿ ಸಾಮಾನ್ಯ ಮಹಿಳೆ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ನಾಗರತ್ನಾ ರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.