ಇಳಂತಿಲ ಗ್ರಾ.ಪಂ ಅಧ್ಯಕ್ಷರಾಗಿ ಚಂದ್ರಿಕಾ ಭಟ್, ಉಪಾಧ್ಯಕ್ಷರಾಗಿ ಸುಪ್ರಿತ್ ಅವಿರೋಧ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಇಳಂತಿಲ: ಇಳಂತಿಲ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಶ್ರೀಮತಿ ಚಂದ್ರಿಕಾ ಭಟ್ ಹಾಗೂ ಉಪಾಧ್ಯಕ್ಷರಾಗಿ ಸುಪ್ರಿತ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಫೆ.೧೧ ರಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದಿದ್ಯದು,  ಒಟ್ಟು 14 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಬೆಂಬಲಿತರು ಅಧಿಕಾರದ ಗದ್ದುಗೆಗೆ ಏರಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹಾಗೂ ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಗಳು ತಲಾ ಒಂದೊಂದು  ಸ್ಥಾನಗಳನ್ನಷ್ಟೇ ಪಡೆದುಕೊಂಡಿದ್ದಾರೆ.

ಇನ್ನು ಇಳಂತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಸ್ಥಾನ ಮೀಸಲಾತಿ ನಿಗದಿಯಾಗಿದ್ದು, ಇಳಂತಿಲ ವಾರ್ಡ್-3 ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಶ್ರೀಮತಿ ಚಂದ್ರಿಕಾ ಭಟ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಇಳಂತಿಲ ವಾರ್ಡ್-2ರಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದ ಸುಪ್ರಿತ್ ರವರು ಉಪಾಧ್ಯಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಅವಿರೊಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಚುನಾವಣೆಯಲ್ಲಿ ಉಜಿರೆ ಪಶು ಸಂಗೋಪಣಾ ಇಲಾಖೆಯ ಪಶು ವೈದ್ಯಾಧಿಕಾರಿ ಡಾ| ಕಾರ್ತಿಕ್ ರವರು ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟಿದ್ದು, ಈ ಸಂದರ್ಭದಲ್ಲಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ, ಕಾರ್ಯದರ್ಶಿ ಶ್ರೀಮತಿ ಶೀಲಾ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.